ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದ ಬಳಿಕ ಬಂಡಾಯ ಶಾಸಕರ ಜೊತೆ ಕೈಜೋಡಿಸಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಇದು ಮತ್ತೊಂದು ಅನಿರೀಕ್ಷಿತ ತಿರುವು ಪಡೆದಿತ್ತು.
ಶಿವಸೇನೆ ಬಂಡಾಯ ಶಾಸಕರ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದು, ಇದನ್ನು ಘೋಷಿಸುವ ವೇಳೆ ಮಾತನಾಡಿದ್ದ ದೇವೇಂದ್ರ ಫಡ್ನವೀಸ್ ತಾವು ಈ ಸರ್ಕಾರದ ಭಾಗವಾಗಿ ಇರುವುದಿಲ್ಲ ಎಂದು ಹೇಳಿದ್ದರು. ಆದರೆ ಆ ಬಳಿಕ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಇದೀಗ ಇದರ ಹಿಂದಿನ ಕಾರಣ ಬಹಿರಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಖುದ್ದು ಎರಡು ಬಾರಿ ದೇವೇಂದ್ರ ಫಡ್ನವೀಸ್ ಅವರಿಗೆ ಕರೆ ಮಾಡಿ ಉಪ ಮುಖ್ಯಮಂತ್ರಿಯಾಗುವಂತೆ ಸೂಚಿಸಿದ್ದರು ಎನ್ನಲಾಗಿದೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದ ದೇವೇಂದ್ರ ಫಡ್ನವೀಸ್ ಡಿಸಿಎಂ ಆಗಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.