ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರದಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ವಿಧಾನಸಭಾ ಕಲಾಪ ಅಂತ್ಯಗೊಂಡ ಬಳಿಕ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಸಿದ್ದರಾಮಯ್ಯನವರು ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಶಾಸಕರಾದ ಆರ್.ವಿ. ದೇಶಪಾಂಡೆ ಭೈರತಿ ಸುರೇಶ್, ಜಮೀರ್ ಅಹ್ಮದ್ ಜೊತೆಯಲ್ಲಿದ್ದರು.
ಈ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ದೇವೇಗೌಡರು ರಾಜ್ಯದ ಹಿರಿಯ ರಾಜಕಾರಣಿ. ಅವರ ಆರೋಗ್ಯ ವಿಚಾರಿಸಲು ಬಂದಿದ್ದೇನೆ. ಇದರಲ್ಲಿ ರಾಜಕೀಯ ವಿಚಾರ ಏನೂ ಇಲ್ಲ ಎಂದು ತಿಳಿಸಿದರು.