alex Certify ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರದಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ವಿಧಾನಸಭಾ ಕಲಾಪ ಅಂತ್ಯಗೊಂಡ ಬಳಿಕ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಸಿದ್ದರಾಮಯ್ಯನವರು ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಶಾಸಕರಾದ ಆರ್.ವಿ. ದೇಶಪಾಂಡೆ ಭೈರತಿ ಸುರೇಶ್, ಜಮೀರ್ ಅಹ್ಮದ್ ಜೊತೆಯಲ್ಲಿದ್ದರು.

ಈ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ದೇವೇಗೌಡರು ರಾಜ್ಯದ ಹಿರಿಯ ರಾಜಕಾರಣಿ. ಅವರ ಆರೋಗ್ಯ ವಿಚಾರಿಸಲು ಬಂದಿದ್ದೇನೆ. ಇದರಲ್ಲಿ ರಾಜಕೀಯ ವಿಚಾರ ಏನೂ ಇಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...