alex Certify ದೇಶದಲ್ಲಿ ಬೆಲೆ ಏರಿಕೆ ಮಾಡಿದ ದಾಖಲೆ ಬರೆದದ್ದೇ ಕಾಂಗ್ರೆಸ್: ಸಿಎಂ ಬೊಮ್ಮಾಯಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಬೆಲೆ ಏರಿಕೆ ಮಾಡಿದ ದಾಖಲೆ ಬರೆದದ್ದೇ ಕಾಂಗ್ರೆಸ್: ಸಿಎಂ ಬೊಮ್ಮಾಯಿ ಆಕ್ರೋಶ

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಕಾಂಗ್ರೆಸ್​ ಆಕ್ರೋಶ ವ್ಯಕ್ತಪಡಿಸಿ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ವಿಪಕ್ಷದ ಬಾಯಿ ಮುಚ್ಚಿಸುವ ಕೆಲಸ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ದೇಶದಲ್ಲಿ ಅತೀ ಹೆಚ್ಚು ಬೆಲೆ ಏರಿಕೆ ಮಾಡಿ ದಾಖಲೆ ನಿರ್ಮಿಸಿದ್ದು ಇದೇ ಕಾಂಗ್ರೆಸ್​ ಸರ್ಕಾರ. ಹೀಗಿರುವಾಗ ಬೆಲೆ ಏರಿಕೆ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕು ಕಾಂಗ್ರೆಸ್​ಗಿಲ್ಲ ಎಂದು ಹೇಳಿದರು.

ಸುಂದರ ಸರೋವರದಲ್ಲಿ ತಲೆಕೆಳಗಾಗಿವೆ ಮರಗಳು, ಈ ವಿಸ್ಮಯದ ರಹಸ್ಯವೇನು ಗೊತ್ತಾ….?

ಇದೇ ವೇಳೆ ಸಂಸದೆ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರಾ ಎಂಬ ಪ್ರಶ್ನೆಗೂ ಉತ್ತರಿಸಿದ ಅವರು ತಮ್ಮ ಸಹೋದರಿಯ ಪುತ್ರಿಯ ಮದುವೆಗೆ ನಮ್ಮನ್ನು ಆಹ್ವಾನಿಸಲು ಸುಮಲತಾ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತ್ರ ಚರ್ಚೆ ನಡೆಸಿದ್ದೇವೆ. ಅದನ್ನು ಬಿಟ್ಟು ಪಕ್ಷ ಸೇರ್ಪಡೆಯ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...