ನವದೆಹಲಿ : ದೇಶದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಆತಂಕ ಹೆಚ್ಚಾಗುತ್ತಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 57 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆ ಕಂಡಿದೆ. ಈಗಾಗಲೇ ಸೋಂಕಿತರ ಪೈಕಿ 115 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು; ಮುಗಿಲು ಮುಟ್ಟಿದ ವಿದ್ಯಾರ್ಥಿಗಳ ಆಕ್ರಂದನ
ಮಹಾರಾಷ್ಟ್ರದಲ್ಲಿಯೇ ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಅಲ್ಲಿ 108 ಜನರಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದೆ.
ಕರ್ನಾಟಕದಲ್ಲಿ ಕೂಡ 31 ಜನರಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದ್ದು, ಈ ಮೂಲಕ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇನ್ನುಳಿದಂತೆ ರಾಷ್ಟ್ರರಾಜಧಾನಿಯಲ್ಲಿ 79, ಗುಜರಾತ್ ನಲ್ಲಿ 43, ತೆಲಂಗಾಣ 38, ಕೇರಳ 37, ತಮಿಳುನಾಡಿನಲ್ಲಿ 34 ಜನರಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದೆ.
ದೇಶದಲ್ಲಿ ಕೂಡ ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ 4ನೇ ಅಲೆಯ ಅಪಾಯ ಎದುರಾಗುತ್ತಿದೆ. ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಮೈ ಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಹೀಗಾಗಿ ಕೇಂದ್ರ ಸರ್ಕಾರವು, ಹಲವು ನಿರ್ಬಂಧಗಳನ್ನು ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.