ದೇಶದ ಮೊದಲ ವಿದ್ಯುತ್ ಚಾಲಿತ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭಕ್ಕೆ ವಾಣಿಜ್ಯ ನಗರಿ ಮುಂಬೈ ಸಜ್ಜಾಗಿದೆ. ಜನವರಿ 14ರಂದು ಈ ಸೇವೆಯನ್ನು ಆರಂಭಿಸಲಾಗುತ್ತದೆ ಎಂದು ಬೃಹತ್ ಮುಂಬೈ ವಿದ್ಯುತ್ ಸರಬರಾಜು ಹಾಗೂ ಸಾರಿಗೆ ಸಂಸ್ಥೆ (ಬೆಸ್ಟ್) ಶನಿವಾರದಂದು ಘೋಷಿಸಿದೆ.
ಅಶೋಕ್ ಲೇಲ್ಯಾಂಡ್ ಈಗಾಗಲೇ ಬಸ್ ಸಿದ್ಧಪಡಿಸಿದ್ದು, ಸ್ವಿಚ್ ಮೊಬಿಲಿಟಿ ಎಂಬ ಹೆಸರಿನ ಈ ಬಸ್ ಅನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಮ್ಮುಖದಲ್ಲಿ ‘ಬೆಸ್ಟ್’ ಗೆ ಹಸ್ತಾಂತರಿಸಲಾಗಿದೆ. ಆರಂಭಿಕ ಹಂತದಲ್ಲಿ ಕನಿಷ್ಠ 10 ಡಬಲ್ ಡೆಕ್ಕರ್ ಬಸ್ ಸೇವೆಯನ್ನು ನೀಡಲು ಚಿಂತನೆ ನಡೆಸಲಾಗಿದೆ.
ಅಲ್ಲದೆ ಈ ತಿಂಗಳಿನಿಂದಲೇ ಮುಂಬೈನಲ್ಲಿ ವಿದ್ಯುತ್ ಚಾಲಿತ ಪ್ರೀಮಿಯಂ ಸಿಂಗಲ್ ಡೆಕ್ಕರ್ ಬಸ್ ಸೇವೆ ಆರಂಭವಾಗಲಿದ್ದು, ಪ್ರಯಾಣಿಕರು ಆಪ್ ಮೂಲಕವೇ ತಮ್ಮ ಆಸನಗಳನ್ನು ಕಾಯ್ದಿರಿಸಬಹುದಾಗಿದೆ. ಇದರ ಜೊತೆಗೆ ಮುಂದಿನ ವರ್ಷದ ಜೂನ್ ತಿಂಗಳಿನಿಂದ ಮುಂಬೈ ನಗರದಲ್ಲಿ 500 ಎಲೆಕ್ಟ್ರಿಕ್ ವಾಹನಗಳ ಟ್ಯಾಕ್ಸಿ ಆರಂಭಿಸಲು ‘ಬೆಸ್ಟ್’ ಯೋಜನೆಯನ್ನು ಹೊಂದಿದೆ.