alex Certify ದೇಶ ಕಟ್ಟುವಲ್ಲಿ ಯುವಜನತೆ ಜವಾಬ್ದಾರಿ ದೊಡ್ಡದಿದೆ : ಸಂಸದ ಬಿ.ವೈ. ರಾಘವೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶ ಕಟ್ಟುವಲ್ಲಿ ಯುವಜನತೆ ಜವಾಬ್ದಾರಿ ದೊಡ್ಡದಿದೆ : ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ : ದೇಶ ಕಟ್ಟುವಲ್ಲಿ ಯುವಜನತೆಯ ಪಾತ್ರ ಮತ್ತು ಜವಾಬ್ದಾರಿ ದೊಡ್ಡದಿದೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ (B. Y. Raghavendra) ಹೇಳಿದರು.

ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಅಮೃತ ಕಾಲದ ಪಂಚಪ್ರಾಣ ಇಂಡಿಯಾ @ 2047 ಜಿಲ್ಲಾ ಮಟ್ಟದ ಯುವ ಉತ್ಸವ (Youth Festival) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ದೇಶಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನವಾದವರು ಇದೇ ಯುವಶಕ್ತಿ. ಸ್ವಾಮಿ ವಿವೇಕಾನಂದರು ಚಿಕಾಗೋ ಸರ್ವಧರ್ಮ ಸಭೆಯಲ್ಲಿ ‘ಎಲ್ಲಿಯವರೆಗೆ ನಮ್ಮ ದೇಶದ ಯುವಶಕ್ತಿ ಪ್ರೇರಣೆಯಿಂದ ಕೆಲಸ ಮಾಡುತ್ತದೋ ಅಲ್ಲಿಯವರೆಗೆ ದೇಶಕ್ಕೆ ಸಾವಿಲ್ಲ ಎಂದಿದ್ದರು. ಯುವಜನತೆ (The youth) ಒಂದು ದೊಡ್ಡ ಶಕ್ತಿ, ಶಿಸ್ತಿನಿಂದ ಸಾಗಿದಾಗ ಸಾಧನೆ ಸಾಧ್ಯ ಎಂದರು.

ಗುಲಾಮಗಿರಿ ಮನಸ್ಥಿತಿಯನ್ನು ತೆಗೆದು ಹಾಕುವುದು ಭಾರತದ ಗುರಿ

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ವಿಶೇಷವಾಗಿ ಯುವಜನತೆಯನ್ನು ಗಮನದಲ್ಲಿಟ್ಟುಕೊಂಡು ಅನೇಕ ಪ್ರೇರಣಾತ್ಮಕ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿತ್ತು. ಇದೀಗ ಶತಮಾನೋತ್ಸವದ ಅಂಗವಾಗಿ ಐದು ಅಂಶಗಳ ಆಧಾರದಲ್ಲಿ ಪಂಚಪ್ರಾಣ ಇಂಡಿಯಾ @ 2047 ಎಂಬ ಕಾರ್ಯಕ್ರಮದಡಿ ಯುವ ಉತ್ಸವವನ್ನು ನಡೆಸುತ್ತಿದೆ.

ಅಭಿವೃದ್ದಿ ಹೊಂದಿದ ಭಾರತದ ಗುರಿ, ಗುಲಾಮಗಿರಿ ಮನಸ್ಥಿತಿಯನ್ನು ತೆಗೆದು ಹಾಕುವುದು, ಯುವಶಕ್ತಿ ಪ್ರೇರಣೆ, ಪರಂಪರೆ ಉಳಿಸಿ ಬೆಳೆಸುವುದು, ಐಕ್ಯತೆ-ಒಗ್ಗಟ್ಟಿನ ಚಿಂತನೆ ಮತ್ತು ನಾಗರೀಕ ಕರ್ತವ್ಯದ ಕುರಿತು ಯುವಜನತೆಯಲ್ಲಿ ಪ್ರೇರಣೆ ತುಂಬಲು ಈ ಕಾರ್ಯಕ್ರಮ ಆಯೋಜಿಸಿದ್ದು ಎಲ್ಲರೂ ಇದರ ಸದುಪಯೋಗ ಪಡೆಯಬೇಕು.

ಪ್ರಸ್ತುತ ಯುಪಿಎಸ್ಸಿಯಂತಹ ಪರೀಕ್ಷೆಗಳಲ್ಲಿ ಹೆಣ್ಣುಮಕ್ಕಳೇ ಮುಂಚೂಣಿಯಲ್ಲಿದ್ದು ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಹೆಣ್ಣುಮಕ್ಕಳು ಸರಿಸಮಾನ ಸ್ಪರ್ಧೆ ನೀಡುತ್ತಿರುವುದು ಸಂತೋಷದ ವಿಚಾರ. ಯುವಜನತೆ ಕೌಶಲ್ಯವನ್ನು ಬೆಳಿಸಿಕೊಳ್ಳಬೇಕು. ಕೌಶಲ್ಯಾಭಿವೃದ್ದಿ ಕೋರ್ಸ್ಗಳ ಉಪಯೋಗ ಪಡೆಯಬೇಕೆಂದರು.

ಪ್ರಸ್ತುತ ಜಿಲ್ಲೆ ಸರ್ವಾಂಗೀಣ ಅಭಿವೃದ್ದಿ ಕಾಣುತ್ತಿದೆ. 2009 ರಿಂದ 2022 ರಲ್ಲಿ ಅನೇಕ ಅಭಿವೃದ್ದಿ ಕೆಲಸಗಳಾಗಿ ಉತ್ತಮ ಬದಲಾವಣೆ ಕಂಡಿದೆ. ಮೆಡಿಕಲ್ ಕಾಲೇಜು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಪಶುವೈದ್ಯಕೀಯ ವಿದ್ಯಾಲಯ, ಎಂಜಿನಿಯರಿಂಗ್ ಕಾಲೇಜು, 2 ಕೇಂದ್ರೀಯ ವಿದ್ಯಾಲಯ, ರಾಷ್ಟ್ರೀಯ ರಕ್ಷಾ ಕಾಲೇಜು, ರ್ಯಾಪಿಡ್ ಆಕ್ಷನ್ ಫೋರ್ಸ್, ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ, ಹೀಗೆ ವಿವಿಧ ಆಯಾಮದಲ್ಲಿ ಅಭಿವೃದ್ದಿ ಕಂಡಿದೆ. ಈಗ ಶಿವಮೊಗ್ಗಕ್ಕೆ ವಂದೇ ಭಾರತ್ ರೈಲ್ವೆಗೆ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಮನವಿ ಸಲ್ಲಿಸಲಾಗಿದೆ. ಶೀಘ್ರವೇ ವಿಮಾನನಿಲ್ದಾಣದಲ್ಲಿ ವಿಮಾನಗಳ ಸೇವೆ ಆರಂಭವಾಗಲಿದೆ. ರೂ.1600 ಕೋಟಿ ವೆಚ್ಚದ ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಯೋಜನೆಗೆ ಶಂಕುಸ್ಥಾಪನೆಯಾಗಿದ್ದು ಇದರಿಂದ 10 ರಾಜ್ಯಕ್ಕೆ ಸಂಪರ್ಕ ಲಭಿಸಲಿದ್ದು, ಕಾಮಗಾರಿ ಆರಂಭವಾಗಿದೆ ಎಂದರು.

ಕಾರ್ಯಕ್ರಮದ ಪ್ರಯುಕ್ತ ಕುವೆಂಪು ರಂಗಮಂದಿರದ ಒಳ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಟಿಟಿಸಿ, ಭದ್ರಾವತಿ ನಗರಸಭೆ, ಕೇಂದ್ರ ವಾರ್ತಾ ಸಚಿವಾಲಯದ ಸಂಹವನ ಇಲಾಖೆಗಳು ಇಲಾಖಾ ಸೌಲಭ್ಯಗಳ ಕುರಿತಾದ ಮಳಿಗೆಗಳನ್ನು ಸ್ಥಾಪಿಸಿದ್ದು, ಸಂಸದರು ಚಾಲನೆ ನೀಡಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...