ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರ ಬೆನ್ನಲ್ಲೇ ದೆಹಲಿ ಸರ್ಕಾರವು ಎಲ್ಲಾ ಬಾರ್ ಹಾಗೂ ರೆಸ್ಟೋರೆಂಟ್ ಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರೆಸ್ಟೋರೆಂಟ್ ಗಳಲ್ಲಿ ಕೇವಲ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡುವ ಬಗ್ಗೆ ದೆಹಲಿ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಕೋವಿಡ್ ಪರಿಸ್ಥಿತಿ ಸಮಾಲೋಚನೆ ಹಾಗೂ ಸೋಂಕು ಹರಡುವಿಕೆ ತಡೆಯಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಜೊತೆಯಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಸಿತು, ಈ ಸಭೆ ಮುಕ್ತಾಯದ ಬಳಿಕ ಈ ಸುದ್ದಿ ಉನ್ನತ ಮೂಲಗಳಿಂದ ಹೊರಬಿದ್ದಿದೆ ಎನ್ನಲಾಗಿದೆ.
ದೆಹಲಿಯಲ್ಲಿ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಹೆಚ್ಚಿನ ನಿಬಂಧನೆಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಭಾನುವಾರವಷ್ಟೇ ಈ ವಿಚಾರವಾಗಿ ಮಾತನಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸದ್ಯಕ್ಕೆ ಲಾಕ್ಡೌನ್ ವಿಧಿಸುವ ಬಗ್ಗೆ ಯಾವುದೇ ಯೋಚನೆಗಳನ್ನು ಮಾಡಿಲ್ಲ. ಜನರು ಸರಿಯಾಗಿ ಮಾಸ್ಕ್ ಧರಿಸಿದರೆ ಲಾಕ್ಡೌನ್ ಅವಶ್ಯಕತೆ ಉದ್ಭವಿಸೋದೇ ಇಲ್ಲ ಎಂದು ಹೇಳಿದ್ದರು.