ದುನಿಯಾ ಸೂರಿ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ ‘ದೊಡ್ಮನೆ ಹುಡ್ಗ’ ತೆರೆಮೇಲೆ ಬಂದು ಈಗಾಗಲೇ 6 ವರ್ಷಗಳಾಗಿವೆ. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಸೂಪರ್ ಡೂಪರ್ ಹಿಟ್ ಆಗಿತ್ತು.
ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ಸುಮಲತಾ ಹಾಗೂ ಭಾರತಿ ವಿಷ್ಣುವರ್ಧನ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಭಾರತಿ ವಿಷ್ಣುವರ್ಧನ್ ಕೂಡ ಅಭಿನಯಿಸಿದ್ದರು. ಈ ಸಿನಿಮಾ ಶೂಟಿಂಗ್ ನ ಕೊನೆಯ ದಿನದಂದು ತೆಗೆಸಿಕೊಂಡ ಫೋಟೋವೊಂದನ್ನು ಸುಮಲತಾ ಅಂಬರೀಶ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸಿದ್ದಾರೆ.
ಈ ಫೋಟೋಗೇ ಅಪ್ಪು ಅಭಿಮಾನಿಗಳಿಂದ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.