
ದ್ರಾಕ್ಷಿಯು ಚರ್ಮದ ಆರೋಗ್ಯಕ್ಕೆ ಬಹಳ ಉಪಯೋಗಕಾರಿ. ಇದು ಮೊಡವೆಗಳಿಗೆ ಪರಿಣಾಮಕಾರಿಯಾದ ಚಿಕಿತ್ಸೆ ನೀಡುತ್ತದೆ. ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುತ್ತದೆ.
ಹಾಗೇ ದ್ರಾಕ್ಷಿ ಹಣ್ಣಿನಲ್ಲಿ ವಿಟಮಿನ್ ಎ, ಸಿ ಸಮೃದ್ಧವಾಗಿರುತ್ತದೆ. ಈ ಹಣ್ಣಿನ ಸಿಪ್ಪೆಯಿಂದ ಮುಖಕ್ಕೆ ಸ್ಕ್ರಬ್ ಮಾಡಿದರೆ ನಿಮ್ಮ ಮುಖದ ಮೊಡವೆಗಳನ್ನು ನಿವಾರಿಸಬಹುದು ಜತೆಗೆ ಚರ್ಮದ ಒಡಕು ಸಮಸ್ಯೆಯನ್ನು ನಿವಾರಿಸುತ್ತದೆ.
ದ್ರಾಕ್ಷಿ ಹಣ್ಣಿನ ಸಿಪ್ಪೆಗೆ ಸಕ್ಕರೆ ಮತ್ತು 3 ಚಮಚ ಬಾದಾಮಿ ಎಣ್ಣೆ ಸೇರಿಸಿ ಮಿಕ್ಸಿಯಲ್ಲಿ ಮಿಶ್ರಣ ಮಾಡಿ ಅದನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಇದನ್ನು ವಾರಕ್ಕೆ 2 ಬಾರಿ ಬಳಸಿ. ಇದರಿಂದ ಮೊಡವೆ ಸಮಸ್ಯೆ ದೂರವಾಗುತ್ತದೆ.