alex Certify ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಹೀರೋ ಮೋಟಾರ್ ಕಾರ್ಪ್, ಜುಲೈ 1ರಿಂದ ಜಾರಿಗೆ ಬರುವಂತೆ ತನ್ನ ಎಲ್ಲ ಬೈಕ್ ಮತ್ತು ಸ್ಕೂಟರ್ ಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಮಾಹಿತಿ ನೀಡಿದೆ.

ಸರಕುಗಳ ದರ ಸೇರಿದಂತೆ ಒಟ್ಟಾರೆ ವೆಚ್ಚ ಹೆಚ್ಚಾಗಿರುವುದರ ಹಿನ್ನಲೆಯಲ್ಲಿ ಅದನ್ನು ಭಾಗಶಃ ಸರಿದೂಗಿಸಲು ಏರಿಕೆಯನ್ನು ಮಾಡಲಾಗುತ್ತಿದೆ ಎಂದು ಕಂಪನಿ ತಿಳಿಸಿದ್ದು, 3 ಸಾವಿರ ರೂಪಾಯಿಗಳವರೆಗೆ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.

ಇತರೆ ಕಂಪನಿಗಳು ಸಹ ಇದೇ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೀಗಾಗಿ ಏರುತ್ತಿರುವ ತೈಲ ಬೆಲೆಗಳ ಜೊತೆಗೆ ದ್ವಿಚಕ್ರವಾಹನಗಳ ದುಬಾರಿ ಬೆಲೆಯನ್ನೂ ಗ್ರಾಹಕರು ಸಹಿಸಿಕೊಳ್ಳಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...