ಬೆಂಗಳೂರು: ಮಾರ್ಚ್ 2023 ರ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ವೇಳಾಪಟ್ಟಿಯ ಕುರಿತಾಗಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆ ಮಾಡುವಂತೆ ಪೋಷಕರಿಗೆ ತಿಳಿಸಲಾಗಿದೆ.
2023ರ ಮಾರ್ಚ್ 10 ರಿಂದ 29 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಿದ್ದು, ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದೆ. ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ವೇಳಾಪಟ್ಟಿ ಪ್ರಕಟಿಸುವಂತೆ ತಿಳಿಸಲಾಗಿದೆ.
ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 21 ರ ಸಂಜೆ 5.30 ರ ಒಳಗೆ jdexam.dpue@gmail.com ಇ-ಮೇಲ್ ಗೆ ಸಲ್ಲಿಸಲು ತಿಳಿಸಲಾಗಿದೆ. ನಂತರ ಬರುವ ಅಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗಿದೆ.