alex Certify ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು ಫಲಿತಾಂಶವೂ ಸಹ ಪ್ರಕಟವಾಗಿದೆ. ಆದರೆ ಕೆಲವು ವಿದ್ಯಾರ್ಥಿಗಳಿಗೆ ತಾವು ನಿರೀಕ್ಷಿಸಿದ ಅಂಕ ಬಂದಿಲ್ಲವೆಂಬ ಕೊರಗು ಇರುತ್ತದೆ. ಅಂತಹ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಉತ್ತರ ಪ್ರತಿಗಳ ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಜುಲೈ 6 ರ ಇಂದಿನಿಂದ ಪಿಯು ಪರೀಕ್ಷಾ ಮಂಡಳಿ ವೆಬ್ಸೈಟ್ https://puc.karnatak.gov.in ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆದ ವಿದ್ಯಾರ್ಥಿಗಳು ಮರು ಮೌಲ್ಯಮಾಪನ ಹಾಗೂ ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಜುಲೈ 7 ರಿಂದ 13 ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...