alex Certify ಧನಂಜಯ್ ಗೆ ಕೋಟಿ ರೂ. ಮೌಲ್ಯದ ಕಾರು ನೀಡಿದ ನಿರ್ಮಾಪಕರು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧನಂಜಯ್ ಗೆ ಕೋಟಿ ರೂ. ಮೌಲ್ಯದ ಕಾರು ನೀಡಿದ ನಿರ್ಮಾಪಕರು….!

ಡಾಲಿ ಧನಂಜಯ್ ಕನ್ನಡ ಚಿತ್ರರಂಗದಲ್ಲಿ ಗಟ್ಟಿಯಾಗಿ ಕಾಲೂರಿದ್ದಾರೆ. ತಮ್ಮ ಸರಳ ಸಜ್ಜನಿಕೆಯಿಂದಾಗಿ ಎಲ್ಲರ ಮೆಚ್ಚಿನವರಾಗಿರುವ ಧನಂಜಯ್ ಅವರ ‘ಗುರುದೇವ್ ಹೊಯ್ಸಳ’ ಚಿತ್ರಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಚಿತ್ರಕ್ಕೆ ಲಭಿಸುತ್ತಿರುವ ಪ್ರತಿಕ್ರಿಯೆಯಿಂದ ಸಂತಸಗೊಂಡಿರುವ ನಿರ್ಮಾಪಕರಾದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್, ಧನಂಜಯ್ ಅವರಿಗೆ 1 ಕೋಟಿ 35 ಲಕ್ಷ ರೂಪಾಯಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಟೊಯೋಟಾ ವೆಲ್ ಫೈರ್ ಕಾರು ಉಡುಗೊರೆಯಾಗಿ ಲಭಿಸಿದ್ದು, ಇದರ ಎಕ್ಸ್ ಶೋರೂಮ್ ಬೆಲೆ 94 ಲಕ್ಷದ 95 ಸಾವಿರ ರೂಪಾಯಿ ಆಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಧನಂಜಯ್, ಇದು ನನ್ನ ನಿರ್ಮಾಪಕರು ಮತ್ತು ಅಭಿಮಾನಿಗಳ ಕೊಡುಗೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...