ಮಹಿಳೆಯೊಬ್ಬರನ್ನು ಬೆದರಿಸಿ ಚಿನ್ನದ ಸರ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳ ಈ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ತನಗೆ ಧರ್ಮದೇಟು ಬೀಳುತ್ತದೆ ಎಂಬ ಕಾರಣಕ್ಕೆ ಸರ ನುಂಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪರಾರಿಯಾಗುವಾಗ ಇಬ್ಬರು ಕಳ್ಳರು ಸಿಕ್ಕಿ ಬಿದ್ದ ವೇಳೆ ಸಾರ್ವಜನಿಕರು ಥಳಿಸಲು ಮುಂದಾಗಿದ್ದಾರೆ.
BIG NEWS: ಇಂದಿನಿಂದ 5 ಜಿಲ್ಲೆ ಹೊರತುಪಡಿಸಿ ರಾಜ್ಯಾದ್ಯಂತ ಶಾಲೆ, ಕಾಲೇಜ್ ಆರಂಭ
ಆಗ ಭಯಗೊಂಡ ಒಬ್ಬಾತ ಚಿನ್ನದ ಸರ ನುಂಗಿದ್ದಾನೆ. ಬಳಿಕ ಆರೋಪಿಗಳನ್ನು ಸಾರ್ವಜನಿಕರು ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಆರೋಪಿ ಹೊಟ್ಟೆಯಲ್ಲಿ ಚಿನ್ನದ ಸರ ಕಂಡುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.