alex Certify ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಸಾಹಿತಿ ಭಗವಾನ್ ವಿರುದ್ಧ ಸಮನ್ಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಸಾಹಿತಿ ಭಗವಾನ್ ವಿರುದ್ಧ ಸಮನ್ಸ್ ಜಾರಿ

Dailyhuntಸಾಹಿತಿ ಕೆ.ಎಸ್. ಭಗವಾನ್ ತಮ್ಮ ‘ರಾಮಮಂದಿರ ಏಕೆ ಬೇಡ ?’ ಎಂಬ ಕೃತಿಯಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಇಕ್ಕೇರಿ ಗ್ರಾಮದ ಸಂಘ ಪರಿವಾರದ ಕಾರ್ಯಕರ್ತ ಮಹಾಬಲೇಶ್ವರ ಎಂಬವರು 2019ರಲ್ಲಿ ಸಾಗರ ನ್ಯಾಯಾಲಯದಲ್ಲಿ ದಾಖಲಿಸಿದ್ದ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಜೆ ಎಂ ಎಫ್ ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಈ ದೂರಿನ ವಿಚಾರಣೆ ನಡೆಸಿದ ಸಾಗರ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ ಬಗಾಡಿ ಅವರು ಪ್ರಕರಣ ದಾಖಲಿಸಿ ಆಗಸ್ಟ್ 30ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಭಗವಾನ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...