alex Certify ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಂದ ವಿಶೇಷ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಂದ ವಿಶೇಷ ಪೂಜೆ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರುದ್ರಾಭಿಷೇಕದ ಜೊತೆಗೆ ತುಲಾಭಾರ ಸೇವೆಯನ್ನೂ ಸಹ ದೇವೇಗೌಡರು ಸಲ್ಲಿಸಿದ್ದು, ಬಳಿಕ ಮಾತನಾಡಿದ ಅವರು, ಮೂರು ವರ್ಷದ ಬಳಿಕ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದೇನೆ ಎಂದು ಹೇಳಿದರು.

ಚಿಕ್ಕ ವಯಸ್ಸಿನಲ್ಲಿ ತಮಗೆ ಕಿವಿ ಸಮಸ್ಯೆಯಾಗಿದ್ದು, ಬಹಳಷ್ಟು ವೈದ್ಯರಿಗೆ ತೋರಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ನಂಜುಂಡೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ನಾನು ಗುಣಮುಖನಾದೆ ಎಂದು ದೇವೇಗೌಡರು ಇದೇ ಸಂದರ್ಭದಲ್ಲಿ ತಿಳಿಸಿದರು.

ದೇವೇಗೌಡರ ಭೇಟಿ ವೇಳೆ ಶಾಸಕರಾದ ಸಾರಾ ಮಹೇಶ್, ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಮೊದಲಾದವರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...