ರಾಜ್ಯದಲ್ಲಿ ಅಮೂಲ್ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಕುಮಾರಸ್ವಾಮಿ ಸೇರಿದಂತೆ ಹಲವರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.
ಇದರ ಮಧ್ಯೆ ಕನ್ನಡದಲ್ಲಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕರ್ನಾಟಕದ “ನಂದಿನಿ” ಅನ್ನು ಗುಜರಾತ್‌ನ ಅಮುಲ್‌ಗೆ ಮಾರಾಟ ಮಾಡುವ ಬಿಜೆಪಿಯ ಷಡ್ಯಂತ್ರ ಈಗ ಸ್ಪಷ್ಟವಾಗಿದೆ.
ಅಮಿತ್ ಶಾ ಅವರು ಮೊದಲಿಗೆ ಬಹಿರಂಗವಾಗಿ ಹೇಳಿಕೆ ನೀಡಿದರು. ಇದೀಗ ಶೋಭಾ ಕರಂದ್ಲಾಜೆ ಅದನ್ನು ಬೆಂಬಲಿಸಿದ್ದಾರೆ.
ನಂದಿನಿ ಇಳಿಕೆ, ಅಮುಲ್ ಗಳಿಕೆ, ಸರ್ಕಾರ ‘ಮೂಕ’ ಬಸವ !
ನಂದಿನಿ ಉಳಿಸಿ, ಬಿಜೆಪಿ ಓಡಿಸಿ ! ಎಂದು ಹೇಳಿದ್ದಾರೆ.