alex Certify ನಕಲಿ ಅಂಕಪಟ್ಟಿ ಬಳಕೆ; ಬಿಜೆಪಿ ಶಾಸಕನಿಗೆ ಐದು ವರ್ಷ ಜೈಲು ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಅಂಕಪಟ್ಟಿ ಬಳಕೆ; ಬಿಜೆಪಿ ಶಾಸಕನಿಗೆ ಐದು ವರ್ಷ ಜೈಲು ಶಿಕ್ಷೆ

ಲಕ್ನೋ : ನಕಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧ ಪಟ್ಟಂತೆ ಉತ್ತರ ಪ್ರದೇಶದಲ್ಲಿ ಶಾಸಕರೊಬ್ಬರ ವಿರುದ್ಧ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯ ಗೋಸಾಯಿಗಂಜ್ ನ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ಎಂಬುವವರೇ ಶಿಕ್ಷೆಗೆ ಒಳಗಾದವರು. ಅಲ್ಲದೇ, ಅವರ ವಿಧಾನಸಭೆ ಸದಸ್ಯತ್ವ ಕೂಡ ರದ್ದಾಗಿದೆ. ಇವರ ಮೇಲೆ ಕಾಲೇಜು ಪ್ರವೇಶಾತಿಗಾಗಿ ನಕಲಿ ಅಂಕಪಟ್ಟಿ ಬಳಸಿರುವ ಆರೋಪ ಇತ್ತು.

1992ರಲ್ಲಿಯೇ ಅಯೋಧ್ಯೆಯ ಸಾಕೇತ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಯದುವಂಶ ರಾಮ್ ತ್ರಿಪಾಠಿ ಎಂಬುವವರು, ತಿವಾರಿ ವಿರುದ್ಧ ನಕಲಿ ಅಂಕಪಟ್ಟಿ ಬಳಕೆ ಮಾಡಿರುವ ಕುರಿತು ರಾಮಜನ್ಮ ಭೂಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸದ್ಯ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಕೋರ್ಟ್, ಅವರಿಗೆ ಜೈಲು ಶಿಕ್ಷೆ ವಿಧಿಸಿದೆ.

ಅಯೋಧ್ಯೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಾ ಸಿಂಗ್ ಅವರು, ಈ ಕುರಿತು ತೀರ್ಪು ನೀಡಿದ್ದಾರೆ. ಅಲ್ಲದೇ, ಅವರಿಗೆ ರೂ. 8 ಸಾವಿರ ದಂಡ ವಿಧಿಸಿದ್ದಾರೆ.

ಹೀಗಾಗಿ ಅವರನ್ನು ವಿಧಾನಸಭೆ ಸದಸ್ಯತ್ವದಿಂದಲೂ ಅನರ್ಹಗೊಳಿಸಲಾಗಿದೆ. ಈ ಕುರಿತು ಅಲ್ಲಿನ ವಿಧಾನಸಭಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ ಅಧಿಸೂಚನೆ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...