
ಬೆಳಗಾವಿ: ಪ್ರತಿಷ್ಠಿತ ಬ್ಯಾಂಕ್ ಒಂದರಲ್ಲಿ ಕೈಚಳಕ ತೋರಿರುವ ಕಳ್ಳರು ನಕಲಿ ಕೀ ಬಳಸಿ ಬರೋಬ್ಬರಿ ಐದುವರೆ ಕೋಟಿ ಮೌಲ್ಯದ ಹಣ, ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದಲ್ಲಿ ನಡೆದಿದೆ.
ಬೆಳಗಾವಿಯ ಬಿಡಿಸಿಸಿ ಬ್ಯಾಂಕ್ ನಲ್ಲಿ ಭಾರಿ ದರೋಡೆ ನಡೆದಿದ್ದು, ಬ್ಯಾಂಕ್ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ನಕಲಿ ಕೀ ಬಳಸಿ ಬರೋಬ್ಬರಿ 4 ಕೋಟಿ ರೂಪಾಯಿ ನಗದು, 1.5 ಕೋಟಿ ಮೌಲ್ಯದ ಚಿನ್ನ ಕದ್ದು ಪರಾರಿಯಾಗಿದ್ದಾರೆ.
ಸಿಕ್ಕ ಅವಕಾಶ ಬಳಸಿಕೊಂಡು ಸಾವಿರಾರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದ ಅನಿವಾಸಿ ಭಾರತೀಯ…!
ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.