
ನಕಲಿ ಪಿ.ಎಚ್.ಡಿ. ಪ್ರಮಾಣ ಪತ್ರ ಸಲ್ಲಿಸಿದ್ದ ಸಹಾಯಕ ಪ್ರಾಧ್ಯಾಪಕನನ್ನು ಕುವೆಂಪು ವಿಶ್ವವಿದ್ಯಾನಿಲಯದ ಕುಲ ಸಚಿವರು ಅಮಾನತುಗೊಳಿಸಿರುವುದಲ್ಲದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜು ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಂ.ಎಚ್. ವಿದ್ಯಾಶಂಕರ ಅಮಾನತುಗೊಂಡವರಾಗಿದ್ದಾರೆ. ಇವರು ತಾವು ಬಿಹಾರದ ಬೋಧಗಯಾ ಮಗಧ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪಡೆದಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದರು.
ಇದರ ಪರಿಶೀಲನೆಗಾಗಿ ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಕಳುಹಿಸಿದ್ದ ವೇಳೆ ಪ್ರಮಾಣ ಪತ್ರ ನಕಲಿ ಎಂಬುದು ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಸಹಾಯಕ ಪ್ರಾಧ್ಯಾಪಕನನ್ನು ಅಮಾನತುಗೊಳಿಸಲಾಗಿದೆ.