
ನಟಿ ನಯನ ತಾರಾ ಅವರ ಮದುವೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜೂನ್ ತಿಂಗಳಿನಲ್ಲಿ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ವೈವಾಹಿಕ ಬದುಕಿಗೆ ಕಾಲಿಡಲಿದ್ದಾರೆ ಎಂದು ತಿಳಿದುಬಂದಿದೆ.
ಸುಮಾರು ಆರು ವರ್ಷಗಳಿಂದ ಈ ಜೋಡಿ ಪ್ರೀತಿಯಲ್ಲಿದ್ದು, ವಿವಾಹದ ಕುರಿತು ವದಂತಿಗಳು ಕೇಳಿಬರುತ್ತಲೇ ಇದ್ದವು. ಅಂತಿಮವಾಗಿ ಜೂನ್ ತಿಂಗಳಿನಲ್ಲಿ ಮದುವೆಯಾಗಲು ಇಬ್ಬರೂ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ವಿಘ್ನೇಶ್, ನಟ ಅಜಿತ್ ಅವರೊಂದಿಗೆ ತಮ್ಮ ಮುಂದಿನ ಚಿತ್ರ ಮಾಡಲಿದ್ದು, ಅದಕ್ಕೂ ಮುನ್ನವೇ ಈ ಜೋಡಿ ವೈವಾಹಿಕ ಬದುಕಿಗೆ ಕಾಲಿಡಲಿದೆ.