ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರರಂಗದಿಂದ ದೂರವಾಗಿದ್ದರೂ ಸಹ ತಮ್ಮ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹಾಕುವ ಪೋಸ್ಟ್ ಗಾಗಿ ಅಭಿಮಾನಿಗಳು ಕಾದು ಕುಳಿತಿರುತ್ತಾರೆ.
ಇದೀಗ ರಮ್ಯಾ ಹಾಕಿರುವ ಅವರ ಹಳೆ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ತಮ್ಮ 18ನೇ ವಯಸ್ಸಿನ ಫೋಟೋವನ್ನು ರಮ್ಯಾ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದು, ಅವರ ಕಾಲೇಜು ದಿನಗಳ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.
ರಾಜಕಾರಣದಲ್ಲಿಯೂ ಗುರುತಿಸಿಕೊಂಡಿದ್ದ ರಮ್ಯಾ ಸಂಸದೆಯಾಗಿ ಆಯ್ಕೆಯಾಗಿದ್ದ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದರು. ಇದೀಗ ರಮ್ಯಾ ಮತ್ತೆ ಚಿತ್ರರಂಗಕ್ಕೆ ಮರಳುತ್ತಾರೆ ಎಂಬ ಮಾತುಗಳ ಮಧ್ಯೆ ಅವರ ಹಳೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.