alex Certify ನಟ ರಮೇಶ್ ಸೇರಿ ಮೂವರಿಗೆ ರಾಣಿ ಚೆನ್ನಮ್ಮ ವಿವಿಯಿಂದ ಗೌರವ ‘ಡಾಕ್ಟರೇಟ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ರಮೇಶ್ ಸೇರಿ ಮೂವರಿಗೆ ರಾಣಿ ಚೆನ್ನಮ್ಮ ವಿವಿಯಿಂದ ಗೌರವ ‘ಡಾಕ್ಟರೇಟ್’

ಇತ್ತೀಚಿಗಷ್ಟೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟ ರಮೇಶ್ ಅರವಿಂದ್ ಅವರಿಗೆ ಇದೀಗ ಗೌರವ ಡಾಕ್ಟರೇಟ್ ಒಲಿದು ಬಂದಿದೆ. ರಮೇಶ್ ಸೇರಿದಂತೆ ಮೂವರು ಗಣ್ಯರಿಗೆ ರಾಣಿ ಚೆನ್ನಮ್ಮ ವಿವಿಯ ಗೌರವ ಡಾಕ್ಟರೇಟ್ ನೀಡಲಾಗಿದೆ.

ನಟ ರಮೇಶ್ ಅರವಿಂದ್, ಬೀದರ್ ನ ಅಕ್ಕ ಅನ್ನಪೂರ್ಣ ಮತ್ತು ಸಮಾಜಸೇವಕ ವಿ. ರವಿಚಂದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ.

ಸೆಪ್ಟೆಂಬರ್ 14ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಣಿ ಚೆನ್ನಮ್ಮ ವಿವಿಯ ಹತ್ತನೇ ಘಟಿಕೋತ್ಸವದ ಸಂದರ್ಭದಲ್ಲಿ ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...