ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಬಿಗಡಾಯಿಸುತ್ತಿದ್ದು, ಆಸ್ಪತ್ರೆ ಖರ್ಚು ವೆಚ್ಚವನ್ನು ಡಿಸಿಎಂ ಅಶ್ವತ್ಥ ನಾರಾಯಣ ಅವರೇ ಭರಸಲು ಮುಂದಾಗಿದ್ದಾರೆ.
ಈ ಕುರಿತು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆ ಡಿಸಿಎಂ ಅಶ್ವತ್ಥನಾರಾಯಣ್ ಸೂಚನೆ ನೀಡಿದ್ದು, ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಡಾ.ಅಶ್ವತ್ಥನಾರಾಯಣ ಫೌಂಡೇಶನ್ ವತಿಯಿಂದ ಭರಿಸಲಾಗುವುದು. ಹೀಗಾಗಿ ಅವರ ಕುಟುಂಬದ ವತಿಯಿಂದ ಚಿಕಿತ್ಸಾ ವೆಚ್ಚ ಪಡೆಯದಂತೆ ತಿಳಿಸಿದ್ದಾರೆ ಎನ್ನಲಾಗಿದೆ.
ಜನನಿಬಿಡ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ
ಈ ನಡುವೆ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿದ್ದು, ಅವರು ಕೋಮಾ ಸ್ಥಿತಿಯಲ್ಲಿದ್ದಾರೆ. ಅವರ ಬ್ರೇನ್ ಫಂಕ್ಷನ್ ಸ್ಥಗಿತವಾಗುತ್ತಿದೆ. ಉಸಿರಾಟ ಕೂಡ ಕ್ಷೀಣಿಸುತ್ತಿದೆ. ಆದರೆ ದೈಹಿಕವಾಗಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.