ಸಿಂಬು ಎಂದೇ ಖ್ಯಾತರಾದ ನಟ ಟಿ.ಆರ್ ಸಿಲಂಬರಸನ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಕಳೆದ 2 ವರ್ಷಗಳಿಂದ ಯಾವುದೇ ಅಫಿಡವಿಟ್ ಸಲ್ಲಿಸಲು ವಿಫಲವಾಗಿರುವ ತಮಿಳುನಾಡು ಚಲನಚಿತ್ರ ಮಂಡಳಿಗೆ ಮದ್ರಾಸ್ ಹೈಕೋರ್ಟ್ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ನಿರ್ಮಾಪಕ ಮೈಕಲ್ ರಾಯಪ್ಪನ್ ವಿರುದ್ಧ ಸಿಂಬು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಪಿ. ವೇಲ್ಮುರುಗನ್ ಈ ಆದೇಶ ನೀಡಿದ್ದಾರೆ. ಇಂಡಸ್ಟ್ರಿಯಲ್ಲಿ ತನ್ನ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡುವ ಮೂಲಕ ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಸಿಂಬು 1 ಕೋಟಿ ರೂಪಾಯಿ ಪರಿಹಾರ ಬೇಕೆಂದು ಆಗ್ರಹಿಸಿ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಈ ಸಂಬಂಧ ಬುಧವಾರದಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ವೇಲುಮುರುಗನ್ ಕಳೆದ 2 ವರ್ಷಗಳಿಂದ ಪ್ರಕರಣದ ಬಗ್ಗೆ ಯಾವುದೇ ಲಿಖಿತ ಅಫಿಡವಿಟ್ ಸಲ್ಲಿಸಲು ವಿಫಲವಾದ ನಿರ್ಮಾಪಕರ ಮಂಡಳಿಯ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನ್ಯಾಯಮೂರ್ತಿ ವೇಲುಮುರುಗನ್ ಮಾರ್ಚ್ 31ರ ಒಳಗಾಗಿ ಹೈಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಮಾಡುವಂತೆ ಹೇಳಿದ್ದಾರೆ.