ದಾವಣಗೆರೆ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಭದ್ರಾ ನದಿಯಲ್ಲಿ ಮೃತದೇಹವೊಂದು ತೇಲಿ ಬಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ.
ಹರಿಹರ ನಗರದ ರಾಘವೇಂದ್ರ ಮಠದ ಬಳಿ ತುಂಗಭದ್ರಾ ನದಿಯಲ್ಲಿ ಪುರುಷನ ಮೃತದೇಹ ತೇಲಿ ಬಂದಿದೆ. ವ್ಯಕ್ತಿಯೋರ್ವರ ಶವ ನದಿ ನೀರಲ್ಲಿ ತೇಲುತ್ತಾ ಬರುವುದು ಕಂಡ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮೇಲಕೆತ್ತುವ ಕಾರ್ಯದಲ್ಲಿ ತೊಡಗಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ವರುಣಾರ್ಭಟಕ್ಕೆ ರಾಜ್ಯದಲ್ಲಿ ನದಿಗಳು ಬೋರ್ಗರೆದು ಹರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಹಲವೆಡೆ-ಸಾವು-ನೋವುಗಳು ಸಂಭವಿಸುತ್ತಿವೆ