alex Certify ನನಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು ಪರಮೇಶ್ವರ್, ಎಸ್.ಎಂ. ಕೃಷ್ಣ: ಸಿದ್ದರಾಮಯ್ಯಗೆ ಸಚಿವ ಸುಧಾಕರ್ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು ಪರಮೇಶ್ವರ್, ಎಸ್.ಎಂ. ಕೃಷ್ಣ: ಸಿದ್ದರಾಮಯ್ಯಗೆ ಸಚಿವ ಸುಧಾಕರ್ ತಿರುಗೇಟು

ಸುಧಾಕರ್ ಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿ ನಾನು ತಪ್ಪು ಮಾಡಿದೆ. ಆತ ಒಬ್ಬ ಭ್ರಷ್ಟ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದು ಪರಮೇಶ್ವರ್ ಹಾಗೂ ಎಸ್.ಎಂ. ಕೃಷ್ಣ ಹೊರತು ಸಿದ್ದರಾಮಯ್ಯನವರಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ನಾನು ಕಾಂಗ್ರೆಸ್ ಶಾಸಕನಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯನವರೊಂದಿಗೆ ವಿಶ್ವಾಸವಿತ್ತು. ಹಾಗಾಗಿ ಅವರನ್ನು ಬಹುತೇಕ ಸಂದರ್ಭಗಳಲ್ಲಿ ಸಮರ್ಥಿಸಿಕೊಂಡಿದ್ದೆ. ಆಗ ನಾನು ಸ್ವಾಮಿ ನಿಷ್ಠೆ ಹಾಗೂ ಪಕ್ಷ ನಿಷ್ಠೆಯನ್ನು ತೋರಿಸಿದ್ದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...