ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣವಿಲ್ಲ: ಮಾಧುಸ್ವಾಮಿ ಸ್ಪಷ್ಟನೆ

2018ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಶಾಸಕರ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ ಬಹಿರಂಗಪಡಿಸಿದ್ದು ಇದರಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹೆಸರು ಕೂಡ ಇತ್ತು.

ಇದೀಗ ಈ ಕುರಿತಂತೆ ಅವರು ಸ್ಪಷ್ಟನೆ ನೀಡಿದ್ದು, ನನಗೆ ತಿಳಿದಿರುವಂತೆ ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಅಂತಹ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ ಎಂದು ತಿಳಿಸಿದ್ದಾರೆ.

2018ರಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ನನ್ನ ವಿರುದ್ಧ ಆಸ್ತಿ ಹಾನಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಅದನ್ನು ಹಿಂಪಡೆಯಲಾಗಿದೆ ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read