ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಸ್ವೆಟರ್ ಹಾಗೂ ಸಮವಸ್ತ್ರ ವಿತರಣೆ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಕೋಮಲ್, ಇದಕ್ಕೂ ನನಗೂ ಸಂಬಂಧವಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೋಮಲ್, ನಾನು ಯಾವುದೇ ಟೆಂಡರ್ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ಬಗ್ಗೆ ತನಿಖೆ ನಡೆಯಲಿ. ಇದು ಸರ್ಕಾರದ ಮಟ್ಟದಲ್ಲಿ ನಡೆಸುವ ಟೆಂಡರ್ ಆಗಿರುತ್ತೆ. ನನಗೂ ಅದಕ್ಕೂ ಸಂಬಂಧವಿಲ್ಲ. ಈ ಬಗ್ಗೆ ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಎಂದರು.
ಮತ್ತೆ ಬಾಲಿವುಡ್ ಗೆ ಹಾರಿದ ಐಂದ್ರಿತಾ ರೇ: ಅಕ್ಟೋಬರ್ ನಲ್ಲಿ ‘ರಾವಣ ಲೀಲಾ’ ರಿಲೀಸ್
ನಾನೋರ್ವ ಸೆಲೆಬ್ರಿಟಿ. ನನ್ನ ಹೆಸರು ಬಳಸಿಕೊಂಡು ಅನಗತ್ಯವಾಗಿ ಆರೋಪ ಮಾಡಲಾಗುತ್ತಿದೆ. ಸುಮ್ಮನೇ ಆರೋಪ ಮಾಡಿ, ನನ್ನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಿದರೆ ಅಂತವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸುವೆ ಎಂದು ಎಚ್ಚರಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಸ್ವೆಟರ್ ಹಾಗೂ ಸಮವಸ್ತ್ರ ನೀಡುವ ಟೆಂಡರ್ ನ್ನು ನಟ ಕೋಮಲ್ ಪಡೆದಿದ್ದು, ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ತರಗತಿಗಳು ನಡೆಯದಿದ್ದರೂ ಶಾಲಾ ಮಕ್ಕಳಿಗೆ ಸ್ವೆಟರ್ ಹಾಗೂ ಸಮವಸ್ತ್ರ ವಿತರಣೆಗೆ ಪಾಲಿಕೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.