alex Certify ನರೇಂದ್ರ ಮೋದಿಯವರು ಓದಿದ್ದೆಷ್ಟು…..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನರೇಂದ್ರ ಮೋದಿಯವರು ಓದಿದ್ದೆಷ್ಟು…..? ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಿಯವರೆಗೆ ವ್ಯಾಸಂಗ ಮಾಡಿದ್ದಾರೆ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಟಿ. ರವಿ ಅವರಿಗೆ ಈ ಕುರಿತು ಮಾಹಿತಿ ಇದ್ದರೆ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಕಾನೂನು ವ್ಯಾಸಂಗ ಮಾಡಿದ್ದೇನೆ. ಅಧಿಕಾರಿಗಳು ಸಿದ್ಧಪಡಿಸಿಕೊಟ್ಟ ಬಜೆಟ್ ಭಾಷಣವನ್ನು ನಾನು ಓದಿದ್ದಾದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಸಹ ಇದೇ ರೀತಿ ಮಾಡಿಲ್ಲವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಪ್ರತಿಪಕ್ಷ ನಾಯಕರುಗಳ ವಿರುದ್ಧ ಹಗೆ ಸಾಧಿಸುತ್ತಿದ್ದು, ಇದಕ್ಕೆ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಮೊದಲಾದವುಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ದೆಹಲಿ ಪೊಲೀಸರು ಸಂಸದ ಡಿ.ಕೆ. ಸುರೇಶ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದು ಖಂಡನೀಯ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...