ನರೇಂದ್ರ ಮೋದಿ ವಿಶ್ವಗುರುವಲ್ಲ ಅವರೊಬ್ಬ ಪುಕ್ಕಲು ಗುರು; ಸಿದ್ದರಾಮಯ್ಯ ಲೇವಡಿ 13-10-2022 6:11AM IST / No Comments / Posted In: Karnataka, Latest News, Live News ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಗುರುವಲ್ಲ, ಅವರೊಬ್ಬ ಪುಕ್ಕಲು ಗುರು. ಅವರಿಗೆ ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಬಚ್ಚಾ ಎಂದಿದ್ದ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮೂಲಕ ಹಲವು ಸವಾಲುಗಳನ್ನು ಹಾಕಿದ್ದಾರೆ. ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನನ್ನ ಎರಡು ಸವಾಲು ಎಂದಿರುವ ಸಿದ್ದರಾಮಯ್ಯನವರು, ಕಾರು, ಜೀಪು ಬಿಟ್ಟು ನಾಲ್ಕು ಕಿಲೋಮೀಟರ್ ಎಡವದೇ ನಡೆದುಕೊಂಡು ಹೋಗಿ. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಲೇವಡಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆಗೆ ಹೋಗುವ ಧೈರ್ಯವಿಲ್ಲ. ಯಾಕೆಂದರೆ ಜನ ಕಲ್ಲು ಹೊಡೆಯುತ್ತಾರೆ ಎಂಬ ಭಯ ಅವರಿಗಿದೆ. ಹೀಗಾಗಿ ಯಡಿಯೂರಪ್ಪನವರನ್ನು ರಕ್ಷಣೆಗಾಗಿ ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ ಎಂದು ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ @BJP4India ಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ. 7/7#ಬಡಾಯಿಬೊಮ್ಮಾಯಿ — Siddaramaiah (@siddaramaiah) October 12, 2022 ಪಾಪ, @BSYBJP ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು. 6/7#ಬಡಾಯಿಬೊಮ್ಮಾಯಿ — Siddaramaiah (@siddaramaiah) October 12, 2022 ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. 5/7#ಬಡಾಯಿಬೊಮ್ಮಾಯಿ — Siddaramaiah (@siddaramaiah) October 12, 2022 ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ @BSBommai ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ. 4/7#ಬಡಾಯಿಬೊಮ್ಮಾಯಿ — Siddaramaiah (@siddaramaiah) October 12, 2022 ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ @BSYBJP ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು. 3/7#ಬಡಾಯಿಬೊಮ್ಮಾಯಿ — Siddaramaiah (@siddaramaiah) October 12, 2022 ಮುಖ್ಯಮಂತ್ರಿ @BSBommai ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ @BSYBJP ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ. 2/7#ಬಡಾಯಿಬೊಮ್ಮಾಯಿ — Siddaramaiah (@siddaramaiah) October 12, 2022 ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ @BSYBJP ಮತ್ತು ಹಾಲಿ ಮುಖ್ಯಮಂತ್ರಿ @BSBommai ಅವರಿಗೆ ನನ್ನ ಎರಡೇ ಎರಡು ಸವಾಲು.. 1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. 2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ. 1/7#ಬಡಾಯಿಬೊಮ್ಮಾಯಿ — Siddaramaiah (@siddaramaiah) October 12, 2022