ಬಜೆಟ್ ಮಂಡನೆ ಬಳಿಕ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮೋದಿಯವರ ಸರ್ಕಾರ ದೇಶವನ್ನು ಇಬ್ಬಾಗ ಮಾಡುತ್ತಿದೆ. ಒಂದು ಭಾರತ ಶ್ರೀಮಂತರಿಂದ ಕೂಡಿದ್ದರೆ ಮತ್ತೊಂದು ಭಾರತದಲ್ಲಿ ಕಡು ಬಡವರಿದ್ದಾರೆ. ಶ್ರೀಮಂತ – ಬಡವರ ನಡುವಿನ ಅಂತರ ದಿನೇ ದಿನೇ ಹೆಚ್ಚಾಗುತ್ತಲೇ ಇದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಸಹೋದರನ ಜೊತೆ ಮಲಗಿದ್ದೇ ತಪ್ಪಾಯ್ತು….! ದೂರವಾದ ಬಾಯ್ ಫ್ರೆಂಡ್
ಶ್ರೀಮಂತರಿಗೆ ಈ ಸರ್ಕಾರ ಎಲ್ಲಾ ಅನುಕೂಲಗಳನ್ನು ಮಾಡಿಕೊಡುತ್ತಿದ್ದು, ಬಡವರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಕಡು ಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಸರ್ಕಾರ ಪ್ರಜಾಪ್ರಭುತ್ವಕ್ಕೆ ಬದಲಾಗಿ ರಾಜ ಪ್ರಭುತ್ವ ವ್ಯವಸ್ಥೆಯನ್ನು ಸ್ಥಾಪಿಸಲು ಮುಂದಾಗಿದೆ ಎಂದು ಆರೋಪಿಸಿದರು.