ನರೇಗಾ ಯೋಜನೆ ಅಡಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಕೂಲಿ ಕಾರ್ಮಿಕರಿಗೆ ಅನುಕೂಲವಾಗಿತ್ತು. ಇದೀಗ ಶಾಲೆ ಹಾಗೂ ಆಸ್ಪತ್ರೆಗಳನ್ನು ಸಹ ನರೇಗಾ ಅಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಇದೀಗ ಕೇಂದ್ರ ಸರ್ಕಾರ ರಾಜ್ಯದ ನರೇಗಾ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ. ಕೂಲಿ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದ್ದು ತಕ್ಷಣದಿಂದಲೇ ಜಾರಿಗೆ ಬರಲಿದೆ.
ಕೂಲಿ ದರದಲ್ಲಿ ಏಳು ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ 309 ರೂಪಾಯಿ ಇದ್ದ ಕೂಲಿಯ ದರ ಈಗ 316 ರೂಪಾಯಿಗಳಾಗಿದೆ. ಕೂಲಿ ದರ ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸವಿದ್ದು, ಈಗ ಕರ್ನಾಟಕದಲ್ಲಿ ಇದನ್ನು ಹೆಚ್ಚಳ ಮಾಡಲಾಗಿದೆ.