ಚಿತ್ರದುರ್ಗ: ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆ ಎಂಬ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ನಳೀನ್ ಕಟೀಲ್ ಓರ್ವ ಭಯೋತ್ಪಾದಕ. ಅವರ ಮಾತಿಗೆ ಕಿಮ್ಮತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುತ್ತೆ ಎಂಬ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, 140 ಸ್ಥಾನ ಗೆಲ್ಲಲು ಮತಗಳು ಏನು ಅವರ ಜೇಬಿನಲ್ಲಿ ಇದೆಯಾ? ರಾಜ್ಯದ ಜನರು ಬಿಜೆಪಿ ಕಿತ್ತೊಗೆಯಲು ತೀರ್ಮಾನಿಸಿದ್ದಾರೆ. ಹೀಗಿರುವಾಗ 140 ಸ್ಥಾನ ಗೆಲ್ಲುವುದು ಸುಲಭದ ಮಾತಲ್ಲ ಎಂದರು.
ಇದೇ ವೇಳೆ ಜೆಡಿಎಸ್ ಬಿಜೆಪಿ ಬಿ ಟೀಂ ಅಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ 6 ಕಡೆಗಳಲ್ಲಿ ಮಾತ್ರ ಅಭ್ಯರ್ಥಿಯನ್ನು ಹಾಕಿದೆ. ಉಳಿದ ಕಡೆಗಳಲ್ಲಿ ಜೆಡಿಎಸ್ ಯಾರಿಗೆ ಬೆಂಬಲ ನೀಡುತ್ತದೆ? ಎಂದು ಪ್ರಶ್ನಿಸಿದ್ದಾರೆ.