ತುಮಕೂರು: ನವವಿವಾಹಿತೆಯನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆ ತಾಲೂಕಿನ ದಂಡಿನಶಿವರ ಗ್ರಾಮದಲ್ಲಿ ನಡೆದಿದೆ.
29 ವರ್ಷದ ಆಶಾ ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವವರನ್ನು ಇತ್ತೀಚೆಗೆ ವಿವಾಹವಾಗಿದ್ದ ಆಶಾ ಇದೀಗ ಏಕಾಏಕಿ ತೋಟದ ಹಳ್ಳದ ಬಳಿ ಹೆಣವಾಗಿ ಪತ್ತೆಯಾಗಿದ್ದಾಳೆ.
ಆಶಾ ತಲೆಯ ಭಾಗಕ್ಕೆ ಯಾರೋ ಬಲವಾಗಿ ಹೊಡೆದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.