
ಈಗಾಗಲೇ ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾಗಳ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಇದರ ಬೆನ್ನಲ್ಲೇ ಶಿವತೇಜಸ್ ನಿರ್ದೇಶನದ ದಿಲ್ ಪಸಂದ್ ಚಿತ್ರದ ರಿಲೀಸ್ ಡೇಟ್ ಇಂದು ಅನೌನ್ಸ್ ಮಾಡಲಾಗಿದೆ. ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು ಹಾಗೂ ಕಿರುತೆರೆ ನಟಿ ಮೇಘ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರ ನವೆಂಬರ್ 11ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಕುರಿತು ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ
ರೊಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಶ್ಮಿ ಫಿಲ್ಮ್ಸ್ ಬ್ಯಾನರ್ ನಡಿ ಸುಮಂತ್ ಕ್ರಾಂತಿ ನಿರ್ಮಾಣ ಮಾಡಿದ್ದು, ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ನೀಡಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಟೀಸರ್ ರಿಲೀಸ್ ಮಾಡಲು ಚಿತ್ರ ತಂಡ ಸಿದ್ಧವಾಗಿದೆ.
