alex Certify ನವೆಂಬರ್ 16ರಂದು ‘ಪುನೀತ್ ನಮನ’; ಚಿತ್ರರಂಗದವರಿಗೆ ಮಾತ್ರ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 16ರಂದು ‘ಪುನೀತ್ ನಮನ’; ಚಿತ್ರರಂಗದವರಿಗೆ ಮಾತ್ರ ಅವಕಾಶ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಕನ್ನಡ ಚಿತ್ರರಂಗದಿಂದ ನುಡಿನಮನ ಸಲ್ಲಿಸಲಾಗುತ್ತಿದ್ದು, ನವೆಂಬರ್ 16ರಂದು ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅಗಲಿಕೆ ನೋವು ಯಾರಿಂದಲೂ ಸಹಿಸಲು ಸಾಧ್ಯವಿಲ್ಲ. ಚಿತ್ರರಂಗದ ವತಿಯಿಂದ ಪವರ್ ಸ್ಟಾರ್ ಗೆ ನುಡಿನಮನದ ಮೂಲಕ ಗೌರವ ಸಲ್ಲಿಸುವ ನಿಟ್ಟಿನಲ್ಲಿ ನ.16ರಂದು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ತೆಲುಗು, ತಮಿಳು ಚಿತ್ರರಂಗದ ಗಣ್ಯರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದರು.

ಪುನೀತ್ ಅಗಲಿಕೆ ನನ್ನ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗಿದೆ; ಭಾವುಕರಾದ ರಾಮ್ ಚರಣ್

ಈ ವೇಳೆ ಮಾತನಾಡಿದ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು, ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪುನೀತ್ ನಮನ ಹೆಸರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಗುರುಕಿರಣ್ ಉಸ್ತುವಾರಿಯಲ್ಲಿ ಸಂಗೀತ ನಮನ ಕೂಡ ಇರಲಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಚಿರರಂಗದವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, ರಾಜ್ ಕುಟುಂಬ ಸದಸ್ಯರಿಗೆ ಅವಕಾಶವಿರುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...