alex Certify ನವೋದಯ ವಿದ್ಯಾಲಯದಲ್ಲಿ ಮತ್ತೆ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೋದಯ ವಿದ್ಯಾಲಯದಲ್ಲಿ ಮತ್ತೆ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿರುವ ನವೋದಯ ವಿದ್ಯಾಲಯದಲ್ಲಿ ಇಂದು ಮತ್ತೆ 10 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಯಲ್ಲಿ ಆತಂಕ ಎದುರಾಗಿದೆ.

ನಿನ್ನೆ ನವೋದಯ ವಿದ್ಯಾಲಯದ 21 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಇಂದು ಮತ್ತೆ ಹತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೋಂಕಿತ ವಿದ್ಯಾರ್ಥಿಗಳನ್ನು ಮಡಿಕೇರಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...