alex Certify ನಾಡಹಬ್ಬ ದಸರಾಗೆ ಇಂದಿನಿಂದ ಚಾಲನೆ; ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಡಹಬ್ಬ ದಸರಾಗೆ ಇಂದಿನಿಂದ ಚಾಲನೆ; ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟನೆ

ನಾಡಹಬ್ಬ ದಸರಾಗೆ ಇಂದಿನಿಂದ ಚಾಲನೆ ಸಿಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಇಂದು ಬೆಳಿಗ್ಗೆ 9:45 ರಿಂದ 10:5 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಹಾಗೂ ಭಗವಂತ ಖೂಬಾ ಉಪಸ್ಥಿತರಿರಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರುಗಳಾದ ಎಸ್.ಟಿ. ಸೋಮಶೇಖರ್, ಸುನಿಲ್ ಕುಮಾರ್ ಹಾಗೂ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಆಗಮಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...