ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ನನ್ನ ಆರೋಗ್ಯ ಉತ್ತಮವಾಗಿದೆ. ಸ್ವಲ್ಪ ವಿಶ್ರಾಂತಿಯ ಅಗತ್ಯವಿರುವ ಕಾರಣ ಮನೆಯಿಂದಲೇ ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ ಕಾರಣ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಹಾಗಾಗಿ ಇನ್ನೂ ಕೆಲವು ದಿನಗಳ ಕಾಲ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ಬಳಿಕ ಪಕ್ಷದ ಕಚೇರಿಗೆ ಭೇಟಿ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.
ನನ್ನ ಆರೋಗ್ಯ ವಿಚಾರಿಸಲು ನಿವಾಸಕ್ಕೆ ಭೇಟಿ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲ ಸಚಿವರು, ಮುಖಂಡರಿಗೆ ನಾನು ಆಭಾರಿ ಎಂದು ದೇವೇಗೌಡರು ತಿಳಿಸಿದ್ದಾರೆ.