
ಭಾರತವನ್ನ ಹಿಂದೂ ರಾಷ್ಟ್ರವಾಗಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವಾರು ಬಿಜೆಪಿ ನಾಯಕರ ಕನಸು. ಆದರೆ ಅವರ ಕನಸು ಎಂದು ನನಸಾಗುವುದಿಲ್ಲ. ನಾನೂ ಜೀವಂತವಾಗಿರುವರೆಗೂ ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ ಎಂದು ತೆಲಂಗಾಣ ಕಾಂಗ್ರೆಸ್ ನಾಯಕ ರಶೀದ್ ಖಾನ್ ಹೇಳಿದ್ದಾರೆ.
ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್, ವಿಎಚ್‌ಪಿ ಮತ್ತು ಬಜರಂಗದಳದ ಕನಸಿನ ಹಿಂದೂ ರಾಷ್ಟ್ರ ಕನಸಾಗೆ ಉಳಿಯುತ್ತದೆ ಹೊರತು ನಿಜವಾಗಲು ಸಾಧ್ಯವಿಲ್ಲ. ದೇಶದಲ್ಲಿ ಮುಸ್ಲಿಮರನ್ನು ಬೆಂಬಲಿಸುವ ಏಕೈಕ ಪಕ್ಷ ಕಾಂಗ್ರೆಸ್, ಕಾಂಗ್ರೆಸ್ ಪಕ್ಷ ಯಾವುದೇ ಭೇದಭಾವವಿಲ್ಲದೆ ಎಲ್ಲ ಧರ್ಮದವರನ್ನು ಸಮಾನವಾಗಿ ಪರಿಗಣಿಸಿದೆ ಎಂದು ಹೈದರಾಬಾದ್ ನ ಸಾರ್ವಜನಿಕ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳಿಂದಲೇ ವಿರೋಧ
ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಮ್ ರಿಜ಼್ವಿ ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ವೇಳೆ, ವಸೀಮ್ ರಿಜ್ವಿ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ಮೂಲಕ ಇಸ್ಲಾಂ ಧರ್ಮವನ್ನು ಅಗೌರವಿಸಿದ್ದಾರೆ, ಅವರ ತಲೆಗೆ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ರು.
ಸದ್ಯ, ರಶೀದ್ ಹೇಳಿಕೆಗೆ ಬಿಜೆಪಿ ನಾಯಕ ಮತ್ತು ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. “ಭಾರತವು ಹಿಂದೂ ರಾಷ್ಟ್ರವಾಗಲು ಸಜ್ಜಾಗಿದೆ ಮತ್ತು ರಶೀದ್ ಖಾನ್ ಅವರಂತಹ ಜನರು ಈ ಕನಸಿನತ್ತ ಶ್ರಮಿಸಲು ನಮ್ಮನ್ನು ಮತ್ತಷ್ಟು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದಾರೆ.