ನಾಮಪತ್ರ ಸಲ್ಲಿಕೆ ವೇಳೆ ಲಕ್ಷ್ಮಣ ಸವದಿ ಶಕ್ತಿ ಪ್ರದರ್ಶನ; ಅಥಣಿಯಲ್ಲಿ ಬೃಹತ್ ರೋಡ್ ಶೋ

ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಸಿಡಿದೆದ್ದು, ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದ ಲಕ್ಷ್ಮಣ ಸವದಿ ಈಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮುನ್ನ ಲಕ್ಷ್ಮಣ ಸವದಿ ನಿವಾಸದಿಂದ ಬೃಹತ್ ರೋಡ್ ಶೋ ನಡೆಸಲಾಗಿದ್ದು ಶಕ್ತಿ ಪ್ರದರ್ಶನ ಮಾಡಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಲಕ್ಷ್ಮಣ ಸವದಿ ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಕ್ಷೇತ್ರದ ಜನತೆ ನನ್ನ ಪರವಾಗಿದ್ದಾರೆ. ಈ ಬಾರಿ ನನ್ನ ಗೆಲುವು ಖಚಿತವಾಗಿದ್ದು, ಇಂದು ಸೇರಿದ್ದ ಜನರೇ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read