alex Certify ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂಬ ಕಾರಣಕ್ಕೆ ಆಡಳಿತರೂಢ ಸರ್ಕಾರಗಳು ಒಂದು ವೇಳೆ ಅಂತಹ ಸ್ಥಳೀಯ ಸಂಸ್ಥೆಗಳಲ್ಲಿ ಬಹುಮತದ ಕೊರತೆ ಇದ್ದರೆ ತಮ್ಮ ಪಕ್ಷದ ಬೆಂಬಲಿಗರನ್ನು ನಾಮ ನಿರ್ದೇಶನ ಮಾಡಿ ಬಳಿಕ ಅಧ್ಯಕ್ಷ -ಉಪಾಧ್ಯಕ್ಷ ಗಾದಿಗೆ ತಮ್ಮವರೇ ಆಯ್ಕೆಯಾಗುವಂತೆ ನೋಡಿಕೊಳ್ಳುತ್ತಿದ್ದರು.

ಇದೀಗ ಈ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯುವ ಚುನಾವಣೆ ವೇಳೆ ಮತದಾನ ಹಕ್ಕು ಇರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ಹೊರಡಿಸಿದ್ದು, ಚುನಾಯಿತ ಸದಸ್ಯರು ಮತ್ತು ನಾಮ ನಿರ್ದೇಶನಗೊಂಡ ಸದಸ್ಯರು ಒಂದೇ ವರ್ಗಕ್ಕೆ ಸೇರಿದ್ದರೂ ಕೂಡ ವ್ಯತ್ಯಾಸವಿದೆ. ಹೀಗಾಗಿ ಅವರುಗಳಿಗೆ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ ವೇಳೆ ಮತದಾನ ಮಾಡುವ ಹಕ್ಕು ನೀಡಲಾಗುವುದಿಲ್ಲ ಎಂದು ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...