alex Certify ನಾಳೆಯಿಂದ ಆರಂಭವಾಗಲಿರುವ ‘ಸಿಇಟಿ’ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ಆರಂಭವಾಗಲಿರುವ ‘ಸಿಇಟಿ’ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಜೂನ್ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.‌ ಈ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿ ಇಲ್ಲಿದೆ.

· ಪರೀಕ್ಷೆಗೆ ಹಾಜರಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು

· ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ತಪ್ಪದೆ ನಮೂದಿಸಬೇಕು.

· ಮೊದಲ ಗಂಟೆ ಬಾರಿಸಲಿರುವ ನಿಗದಿತ ಅವಧಿಗಿಂತಲೂ ಅರ್ಧ ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.

· ವಿದ್ಯಾರ್ಥಿಗಳು ತಮ್ಮ ಪ್ರವೇಶಪತ್ರ (ಅಡ್ಮಿಶನ್ ಟಿಕೆಟ್) ಮತ್ತು ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರವನ್ನು ತರಬೇಕು (ಕಾಲೇಜಿನ ಗುರುತು ಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್/ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/12ನೇ ತರಗತಿಯ ಪ್ರವೇಶ ಪತ್ರ ಇತ್ಯಾದಿಗಳ ಪೈಕಿ ಒಂದು).

· ಯಾವುದೇ ತರಹದ ಕೈಗಡಿಯಾರಗಳನ್ನು ಕಟ್ಟಿಕೊಂಡು ಬರುವಂತಿಲ್ಲ.

· ಟ್ಯಾಬ್, ಮೊಬೈಲ್, ಕ್ಯಾಲ್ಕುಲೇಟರುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...