
ಉಡುಪಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ನಾಳೆಯಿಂದ ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಫೆಬ್ರವರಿ 12ರಿಂದ 19ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಉಡುಪಿ ಡಿಸಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.
ಎಲೆಕ್ಷನ್ ಮುಗಿದ ಬಳಿಕ 4ನೇ ಅಲೆ…? ಜನಸಾಮಾನ್ಯರು ಯೋಚಿಸಲೇಬೇಕಾದ ಮಹತ್ವದ ವಿಚಾರ ಹೇಳಿದ ಡಾ. ರಾಜು
ಶಾಲೆಗಳ ಸುತ್ತಮುತ್ತ ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆಗಳನ್ನು ನಡೆಸುವಂತಿಲ್ಲ. ಯಾರೂ ಕೂಡ, ಜಾತಿ, ಧರ್ಮಗಳ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನಾಗಲಿ, ಪೋಸ್ಟ್ ಗಳನ್ನಾಗಲಿ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ.