ನಾಳೆಯಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 20-21) ನಡೆಯಲಿದ್ದು, ರಾಜ್ಯದಾದ್ಯಂತ 530 ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ ಒಟ್ಟು 2,01,816 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ಆಗಸ್ಟ್ 28ರ ನಾಳೆ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳ ಪರೀಕ್ಷೆ ನಡೆಯಲಿದ್ದರೆ, ಆಗಸ್ಟ್ 29ರಂದು ಭೌತ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಆಗಸ್ಟ್ 30ರಂದು ಹೊರ – ಗಡಿ ಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಕೈಗಡಿಯಾರ, ಟ್ಯಾಬ್ಲೆಟ್, ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ಕೊಠಡಿಗೆ ತರದಂತೆ ನಿರ್ಬಂಧ ವಿಧಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ.