ನಾಳೆಯಿಂದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಆರಂಭವಾಗಲಿದ್ದು, 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟಾರೆ 94,649 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ. ಜುಲೈ 11 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಿ ಆಗಸ್ಟ್ ಮೊದಲ ವಾರ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.
ಈ ಬಾರಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ ಇಲ್ಲಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಬಸ್ ನಿರ್ವಾಹಕರಿಗೆ ತೋರಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಮತ್ತು ವಾಪಸ್ ಮರಳಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.