ಕೆ ರಾಮ್ ನಾರಾಯಣ್ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷಿತ ಅಬ್ಬರ ಸಿನಿಮಾ ನಾಳೆ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಈ ಚಿತ್ರವನ್ನು ವೀಕ್ಷಿಸಲು ಸಿನಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ಆಕ್ಷನ್ ಥ್ರಿಲ್ಲರ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ಸೇರಿದಂತೆ ನಿಮಿಕಾ ರತ್ನಾಕರ್, ರಾಜಶ್ರೀ ಪೊನ್ನಪ್ಪ, ರವಿಶಂಕರ್, ಲೇಖ ಚಂದ್ರ ಸೇರಿದಂತೆ ಮೊದಲಾದ ಕಲಾವಿದರು ಅಭಿನಯಿಸಿದ್ದು ಸಿ&ಎಮ್ ಮೂವೀಸ್ ಬ್ಯಾನರ್ ನಡಿ ಬಸವರಾಜ್ ಮಂಚಯ್ಯ ನಿರ್ಮಾಣ ಮಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಸಂಗೀತ ಈ ಚಿತ್ರಕ್ಕಿದೆ