alex Certify ನಾಳೆ ಬಿಡುಗಡೆಯಾಗಲಿದೆ ‘ಗೌಳಿ’ ಚಿತ್ರದ ಎರಡನೇ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಗೌಳಿ’ ಚಿತ್ರದ ಎರಡನೇ ಹಾಡು

ಸೂರ ನಿರ್ದೇಶನದ ಶ್ರೀನಗರ ಕಿಟ್ಟಿ ನಟನೆಯ ಬಹುನಿರೀಕ್ಷಿತ ‘ಗೌಳಿ’ ಚಿತ್ರದ ಲಿರಿಕಲ್ ಸಾಂಗ್ ನಾಳೆ ಗಾಂಧಿ ಜಯಂತಿಯ ಪ್ರಯುಕ್ತ ಬಿಡುಗಡೆಯಾಗಲಿದೆ.

ತಂದೆ ಹಾಗೂ ಮಗಳ ಬಾಂಧವ್ಯದ ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಶಶಾಂಕ್ ಶೇಷಗಿರಿ ಸಂಗೀತ ಹಾಗೂ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ.

‘ಮಗಳೇ ಈಗಲೇ ವಿಮಾನ ನಿನಗೆ’ ಎಂಬ ಈ ಹಾಡು ನಾಳೆ ಬೆಳಿಗ್ಗೆ 11:52ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ  ರಿಲೀಸ್ ಆಗಲಿದೆ

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರವನ್ನು ಸೋಹನ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ನಡಿ ರಘು ಸಿಂಗಂ ನಿರ್ಮಾಣ ಮಾಡುತ್ತಿದ್ದು, ಶ್ರೀನಗರ ಕಿಟ್ಟಿ ಹಾಗೂ ಪಾವನಾ ಗೌಡ ಸೇರಿದಂತೆ ರಂಗಾಯಣ ರಘು,  ಶಿವಣ್ಣ ರುದ್ರೇಶ್, ಯಶ್ ಶೆಟ್ಟಿ, ಶರತ್ ಲೋಹಿತಾಶ್ವ ಹಾಗೂ ‘ಟಗರು’ ಖ್ಯಾತಿಯ ಕಾಕ್ರೋಚ್ ಸುಧಿ ಬಣ್ಣ ಹಚ್ಚಿದ್ದಾರೆ. ಈಗಾಗಲೇ ಈ ಸಿನಿಮಾ ಶೂಟಿಂಗ್ ಮುಕ್ತಾಯ ಹಂತದಲ್ಲಿದೆ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...